ಅಮೆರಿಕಾದ ಲೆವೆಸ್ಟಾನ್ನ ಮೈನೆಯಲ್ಲಿ ರೈಫಲ್ ತರಬೇತಿದಾರನೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ೨೨ ಮಂದಿ ಮೃತಪಟ್ಟಿದ್ದು, ಹಲವರಿಗೆ ಗಾಯವಾಗಿದೆ. ಈ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಗುಂಡಿನ ದಾಳಿ ನಡೆಸುತ್ತಿರುವ ವ್ಯಕ್ತಿಯ ಭಾವಚಿತ್ರವನ್ನು ಫೇಸ್ಬುಕ್ನಲ್ಲಿ ಹಂಚಿಕೊಳ್ಳಲಾಗಿದೆ. ಲೆವೆಸ್ಟಾನ್ನ ರಸ್ತೆಯಲ್ಲಿ ಗುಂಡಿನ ದಾಳಿಯಿಂದ ಜನರು ಚಲ್ಲಾಪಿಲ್ಲಿಯಾಗಿ ಹೋಗುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.
ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ರಾಬರ್ಟ್ ಕಾರ್ಡ್ ಎಂದು ಗುರುತಿಸಲಾಗಿದೆ. ಈತನಿಗೆ ಮಾನಸಿಕ ಕಾಯಿಲೆಯಿದ್ದು, ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ತುರ್ತುಪರಿಸ್ಥಿತಿಯಲ್ಲಿ ರಕ್ಷಣೆ ಮಾಡುವುದಕ್ಕೆ ಮುಂದಾದ ಪೊಲೀಸರು ಈ ರೀತಿ ದುರಂತ ನಡೆದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ