ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ೬೮ ಮಂದಿಗೆ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉನ್ನತ ಮಟ್ಟದ ಸಭೆ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ನಡೆದಿದೆ. ಈ ಬಾರಿ ಕನಿಷ್ಠ ೬೮ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.
ಈ ಬಾರಿ ೫೦ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ೧೦ ಸಂಘ ಸಂಸ್ಥೆಗಳಿಗೆ ವಿಶೇಷ ಪ್ರಶಸ್ತಿ ನೀಡಲಾಗುವುದು ಎಂದಿದ್ದಾರೆ. ಒಟ್ಟು ೩೫೨೩ ಅರ್ಜಿಗಳು ಬಂದಿದ್ದು, ೨೬, ೫೫೫ ಶಿಫಾರಸ್ಸು ಬಂದಿದೆ.
೨೮ ಸಮಿತಿ ಸದಸ್ಯರು ಅರ್ಹರನ್ನು ಆಯ್ಕೆ ಮಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ಪ್ರಶಸ್ತಿ ವಿಜೇತರ ಹೆಸರುಗಳನ್ನು ಬಹಿರಂಗ ಪಡಿಸಲಾಗುವುದು ಎಂದು ಅವರು ಹೇಳಿದರು.