ವಿಜಯನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೈಲಿಗೆ ಸೇರುವ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ ಹೇಳುವ ಜ್ಯೋತಿಷ್ಯಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಕುಮಾರಸ್ವಾಮಿ ಅವರು ಕೂಡ ನಮ್ಮ ಹಾಗೆ ರಾಜಕಾರಣಿಗಳು, ಡಿ,ಕೆ,ಶಿವಕುಮಾರ್ ಜೈಲಿಗೆ ಸೇರುವ ಬಗ್ಗೆ ಕಾಲವೇ ನಿರ್ಧರಿಸಲಿದೆ. ಈಡಿ ಮತ್ತು ಐಟಿ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಬಿಜೆಪಿ ನಾಯಕರ ಮೇಲೆ ಏಕೆ ಆಗಿಲ್ಲ? ಈ ಬಗ್ಗೆ ಬಿಜೆಪಿ ನಾಯಕರು ಧಮ್ಮು ಇದ್ದರೆ ಉತ್ತರಿಸಬೇಕು ಎಂದು ಅವರು ಆರೋಪ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರ ವಿರುದ್ಧ ಈಡಿ ದಾಳಿ ನಡೆಸುತ್ತಿದೆ. ಬಿಜೆಪಿ ನಾಯಕರ ಮನೆ ಮೇಲೆ ಈಡಿ ದಾಳಿ ಏಕಿ ಮಾಡ್ತಿಲ್ಲ? ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಉತ್ತರಿಸಬೇಕಿದೆ ಎಂದರು.