ಯುವರಕರು ವಾರದಲ್ಲಿ 70 ಗಂಟೆಗಳ ಕಾಲ ಉದ್ಯೋಗ ಮಾಡಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.
ಭಾರತದಲ್ಲಿನ ಉದ್ಯೋಗ ಸಂಸ್ಕೃತಿ ಬದಲಾಗಬೇಕಾಗಿದೆ. ಯುವಕರು ವಾರದಲ್ಲಿ ಕನಿಷ್ಠ 70 ಗಂಟೆ ಕೆಲಸ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಈ ಮೂಲಕ ಭಾರತ ಜಾಗತಿಕ ಮಟ್ಟದಲ್ಲಿ ಕೌಶಲ್ಯ ಬೆಳೆಸಿಕೊಳ್ಳಲು ಸಾಧ್ಯ ಎಂದು ನಾರಾಯಣಮೂರ್ತಿ ಹೇಳಿದ್ದಾರೆ.
77 ವರ್ಷದ ನಾರಾಯಣಮೂರ್ತಿ ಇನ್ಫೋಸಿಸ್ ಸಿಇಒ ಮೋಹನ್ ದಾಸ್ ಪೈ ಜೊತೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಎರಡನೇ ಮಹಾಯುದ್ಧದ ನಂತರ ಜಪಾನ್ ಮತ್ತು ಜರ್ಮನಿಯಲ್ಲಿ ಕೆಲಸದ ಸಂಸ್ಕೃತಿ ಬದಲಾಗಿದ್ದು, ಅಲ್ಲಿ ಎಲ್ಲರೂ ಹೆಚ್ಚು ಅವಧಿ ಕೆಲಸ ಮಾಡುತ್ತಾರೆ. ಈ ಸಂಸ್ಕೃತಿ ಭಾರತದಲ್ಲೂ ಬರಬೇಕಿದೆ ಎಂದು ಅವರು ಹೇಳಿದರು.
ಸರಕಾರದಿಂದ ಆಗುವ ವಿಳಂಬವನ್ನು ತಡೆಯಲು ಸಾಧ್ಯವಾದರೆ ಭಾರತದಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಿಸಬಹುದು ಎಂದು ಅಭಿಪ್ರಾಯಪಟ್ಟರು. ಅಲ್ಲದೇ ಸಂವಾದ ಕಾರ್ಯಕ್ರಮದಲ್ಲಿ ಕಟ್ಟಡ, ತಂತ್ರಜ್ಞಾನ ಸೇರಿದಂತೆ ಹಲವು ವಿಷಯಗಳ ಕುರಿತು ನಾರಾಯಣ ಮೂರ್ತಿ ಪ್ರಸ್ತಾಪ ಮಾಡಿದ್ದಾರೆ.