ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರೆತ ಉಂಟಾಗಿದೆ. ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿದ್ದು, ಈ ಹಿನ್ನಲೆ ಕೇಂದ್ರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಬೆಂಗಳೂರಿನ ಸದಾಶಿವನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿದ್ದು, ಹಾಗಾಗಿ ಕೇಂದ್ರದ ನಡೆ ಖಂಡಿಸಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ. ನಾನು ನಗರದ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು. ಸದಾಶಿವನಗರದಲ್ಲಿ ಮಾತನಾಡಿದ ಅವರು, ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಬಡವರಿಗೆ ಅಕ್ಕಿ ನೀಡದೆ ಕೇಂದ್ರವು ತೊಂದರೆ ನೀಡಲು ಹೊರಟಿದೆ. ಅಕ್ಕಿ ನೀಡಲು ನಿಯಮ, ಪದ್ಧತಿ ಇದೆ, ಪುಕ್ಕಟೆ ಏನು ಕೊಡಲ್ಲ ಎಂದಿದ್ದಾರೆ.
ಹೈಕಮಾಂಡ್ ಭೇಟಿಗೆ ಎಲ್ಲಾ ಸಚಿವರು ಸಮಯ ಕೇಳಿದ್ದೇವೆ. ಸಮಯ ನೀಡಿದರೆ ಎಲ್ಲಾ ಸಚಿವರು ಹೈಕಮಾಂಡ್ ಭೇಟಿಯಾಗುತ್ತೇವೆ. ಹೈಕಮಾಂಡ್ ಭೇಟಿ ವೇಳೆ ಗ್ರೂಪ್ ಫೋಟೋ ಇದೆ ಎಂದು ಹೇಳಿದರು.
ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿ
ಅಕ್ಕಿ ಕೊಡುತ್ತೇವೆಂದಿದ್ದ FCI ನಂತರ ಸಾಧ್ಯವಿಲ್ಲವೆಂದು ಪತ್ರ ಬರೆದಿತ್ತು. ಇದರೊಂದಿಗೆ ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಮಾಡುತ್ತಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿ. ಭಾರತೀಯ ಜನತಾ ಪಕ್ಷದ ನಿರ್ಧಾರಕ್ಕೆ ನಾವು ಧಿಕ್ಕಾರ ಹೇಳಬೇಕು. ಹೀಗಾಗಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜೂನ್ 12ರಂದು 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುತ್ತೇವೆ ಎಂದು ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಹೇಳಿತ್ತು. ಆಮೇಲೆ ಮತ್ತೊಂದು ಪತ್ರ ಬರೆದು ಕೊಡಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ. ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದಿದ್ದರು.
ಆರ್.ಅಶೋಕ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್
ಸಂಸದ ಡಿ.ಕೆ.ಸುರೇಶ್ ರಾಜಕೀಯದ ಬಗ್ಗೆ ವೈರಾಗ್ಯದ ಮಾತು ವಿಚಾರವಾಗಿ ಮಾತನಾಡಿದ ಅವರು, ಡಿ.ಕೆ.ಸುರೇಶ್ ಪ್ರಜ್ಞಾವಂತ, ಅನುಭವಿ ನಾಯಕ. ಅವರು ಯಾವುದೇ ವೈರಾಗ್ಯ ಇಲ್ಲ. ಆರ್.ಅಶೋಕ್ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನು ನೋಡಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ.