ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುನ್ನ ನಟ ರಾಜ್ಕುಮಾರ್ ರಾವ್ ಅವರನ್ನು ರಾಷ್ಟ್ರೀಯ ಐಕಾನ್ ಆಗಿ ನೇಮಿಸುವುದಾಗಿ ಚುನಾವಣಾ ಆಯೋಗ ಹೇಳಿದೆ.
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಭಾರತದಾದ್ಯಂತ ಐದು ರಾಜ್ಯಗಳಲ್ಲಿ ೧೬೧ ಮಿಲಿಯನ್ ಜನರು ಮತ ಚಲಾಯಿಸಲಿದ್ದಾರೆ ಎಂದು ಭಾರತದ ಚುನಾವಣಾ ಆಯೋಗವು ಈ ತಿಂಗಳ ಆರಂಭದಲ್ಲಿ ಘೋಷಿಸಿತು. ನವೆಂಬರ್ ೭ರಂದು ಮಿಜೋರಾಂ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.
೯೦ ಸದಸ್ಯ ಬಲದ ವಿಧಾನಸಭೆ ಹೊಂದಿರುವ ಛತ್ತೀಸ್ಗಡ್ದಲ್ಲಿ ನವೆಂಬರ್ ೭ ಮತ್ತು ೧೭ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ನವೆಂಬರ್ ೧೭ ಮತ್ತು ೩೦ರಂದು ಚುನಾವಣೆ ನಡೆಯಲಿದೆ.