ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ ಗೇಟ್ ಬಳಿ ಸಂಭವಿಸಿದ ಫಾರ್ಚುನರ್ ಕಾರು ಮತ್ತು ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭರಮಸಾಗರ: ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ ಗೇಟ್ ಬಳಿ ಸಂಭವಿಸಿದ ಫಾರ್ಚುನರ್ ಕಾರು ಮತ್ತು ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಬೆಂಗಳೂರು ಮೂಲದ ಕುಟುಂಬವೊಂದು ಗೋವಾ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ಸು ಬರುವಾಗ ಸೋಮವಾರ ಬೆಳಗ್ಗೆ 7.30ಕ್ಕೆ ಈ ಅಪಘಾತ ಸಂಭವಿಸಿದೆ.
ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ ನ ಜಾಕೀರ್ ಅಹಮ್ಮದ್(60), ತಬಸ್ಸುಮ್(28) ಹಾಗೂ ಮೂರು ವರ್ಷದ ಮಗು ಹಯಾತ್ ಫಾತಿಮಾ ಮೃತಪಟ್ಟಿದ್ದಾರೆ. ನಾಜಿಯಾ, ಇಮ್ರಾನ್ ಖಾನ್, ಶೋಯೇಬ್ ಅಹ್ಮದ್, ತಬ್ರೀಜ್ ಅಹ್ಮದ್ ಹಾಗೂ ಸಬಾ ಇವರುಗಳಿಗೆ ತೀವ್ರ ಗಾಯಾಳುಗಳಾಗಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಲಾರಿಗೆ ಅಪ್ಪಳಿಸಿದೆ. ಸ್ಥಳದಲ್ಲಿಯೇ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.
ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿಯೇ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.