ತೆಲಂಗಾಣದ ಪ್ರಚಾರದ ವೇಳೆ ಕೆಸಿಆರ್ ಸಂಸದ ಕೋಥಾ ಪ್ರಭಾಕರ್ ರೆಡ್ಡಿಗೆ ದುಷ್ಕರ್ಮಿಯೊಬ್ಬ ಚಾಕು ಇರಿಯಲಾಗಿದೆ.
ಚಾಕು ಇರಿತದಿಂದ ಗಾಯಗೊಂಡಿರುವ ಪ್ರಭಾಕರ್ ರೆಡ್ಡಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಸಿದ್ದಿಪೇಟೆ ಜಿಲ್ಲೆಯಲ್ಲಿ ಪ್ರಚಾರ ಮುಗಿಸಿ ಮನೆಗೆ ಮರಳುತ್ತಿದ್ದಾಗ ಪ್ರಭಾಕರ್ ರೆಡ್ಡಿ ಅವರ ಮೇಲೆ ದಾಳಿ ನಡೆದಿದೆ.
ಅಪರಿಚಿತ ವ್ಯಕ್ತಿ ಸಂಸದರಿಗೆ ಥ್ಯಾಂಕ್ಸ್ ಕೊಡುವ ನೆಪದಲ್ಲಿ ಹತ್ತಿರ ಬಂದಿದ್ದು, ಕೈ ಕೊಡುವ ಸಮಯದಲ್ಲಿ ಚಾಕು ತೆಗೆದು ಇರಿದಿದ್ದಾನೆ ಎಂದು ಮೂಲಗಳು ತಿಳಿಸಿವೆ.