ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಗೆ ನಾನು ವಿಷಕನ್ಯ ಅಂದಿದ್ದೇನೆ. ನಾನು ಕ್ಷಮೆ ಕೇಳಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ 91 ಸಾರಿ ಬೈದಿದ್ದಾರೆ. ಹೀಗಾಗಿ ವಿಷ ಸರ್ಪ ಅಂದಾಗ ನಾನು ವಿಷಕನ್ಯ ಅಂದಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಹುಬ್ಬಳ್ಳಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಗೆ (Sonia Gandhi) ನಾನು ವಿಷಕನ್ಯ ಅಂದಿದ್ದೇನೆ. ನಾನು ಕ್ಷಮೆ ಕೇಳಲ್ಲ. ದೊರೆಸ್ವಾಮಿ ನಾಟಕ ಕಂಪನಿಗೆ ಕಾಂಗ್ರೆಸ್ (Congress) ಏಜೆಂಟ್ ಅಂದಿದ್ದೆ. ನಾನು ರಾಜೀನಾಮೆ ಕೊಡುತ್ತೇನೆ. ಕ್ಷಮೆ ಕೇಳಲ್ಲ. ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಬಗ್ಗೆ 91 ಸಾರಿ ಬೈದಿದ್ದಾರೆ. ಹೀಗಾಗಿ ವಿಷ ಸರ್ಪ ಅಂದಾಗ ನಾನು ವಿಷಕನ್ಯ ಅಂದಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿಯಾಗುವ ವಿಚಾರವಾಗಿ ಮಾತನಾಡಿದ ಅವರು ಪಕ್ಷ ಯಾರನ್ನಾದರು ಮುಖ್ಯಮಂತ್ರಿ ಮಾಡಲಿ, ಬಸವರಾಜ ಬೊಮ್ಮಾಯಿ ಅವರನ್ನಾದರೂ ಮಾಡಲಿ ಅಥವಾ ನನ್ನನ್ನಾದರೂ ಮಾಡಲಿ ಎನ್ನುವ ಮೂಲಕ ಮುಖ್ಯಮಂತ್ರಿಯಾಗುವ ಇಂಗಿತವನ್ನು ವ್ಯಕ್ತಪಿಡಿಸದರು.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಎಲ್ಲರಕ್ಕಿಂತ ನಾನು ಗಟ್ಟಿಯಾಗಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರದು ನಮ್ಮ ತರಹ ಸ್ಟ್ರಾಂಗ್ ಹಿಂದೂತ್ವ ಅಲ್ಲ. ಅವರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ನಾನು ಮುಖ್ಯಮಂತ್ರಿ ಆಗುವ ಕನಸು ಕಂಡಿಲ್ಲ ಎಂದು ಸ್ಪಷ್ಟಪಡಿಸಿದರು.