ಬೆಂಗಳೂರು, ಜೂ.1 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್.ಜಯರಾಮ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ನೂತನ ಕಾರ್ಯದರ್ಶಿಯಾಗಿ ಸರ್ಕಾರದಿಂದ ನೇಮಕವಾಗಿರುವ 2004ರ ಬ್ಯಾಚಿನ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ 2020ರ ಇಸವಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಜೊತೆ ವಾರ್ತಾ ಮತ್ತು ಪ್ರಸಾರ ಇಲಾಖೆ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲು ನೇಮಕವಾಗಿದ್ದಾರೆ. ಈ ಮಧ್ಯೆ ಕೆಲವು ತಿಂಗಳು ಕಾಲ ಕಂದಾಯ ಇಲಾಖೆಯಲ್ಲೂ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಿದ್ದರು.

ವಾರ್ತಾ ಇಲಾಖೆ ಆಯುಕ್ತರ ಹುದ್ದೆಗೆ ಈ ಹಿಂದೆ ಐಪಿಎಸ್ ಅಧಿಕಾರಿ ಹರ್ಷ ಅವರು ಕಾರ್ಯನಿರ್ವಹಿಸಿದ್ದು, ಅಧ್ಯಯನ ರಜೆ ತೆಗೆದುಕೊಂಡ ಕಾರಣ ಆ ಹುದ್ದೆಗೆ ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ನಿಯೋಜಿಸಲಾಗಿತ್ತು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಡಿಐಪಿಆರ್ ಇಲಾಖೆಗೆ ನಿಯೋಜನೆಗೊಂಡಿದ್ದ ವಿನೋತ್ ಪ್ರಿಯಾ ಅವರು ಚುನಾವಣಾ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

By admin

Leave a Reply

Your email address will not be published. Required fields are marked *