ಗಾಯಗೊಂಡಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಕರ್ನಾಟಕದ ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಅವರಿಗೆ ಅವಕಾಶ ನೀಡಲಾಗಿದೆ.
ಪ್ರಸ್ತುತ ಭಾರತ ತಂಡ ವಿಶ್ವಕಪ್ ನಲ್ಲಿ ಆಡಿದ 7 ಪಂದ್ಯಗಳಲ್ಲಿ 7ರಲ್ಲಿ ಜಯ ಸಾಧಿಸಿ ಅಜೇಯವಾಗಿ ಅಗ್ರಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿದೆ.
ಮಂಡಿ ನೋವಿನಿಂದ ನರಳುತ್ತಿರುವ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಗೂ ಮುನ್ನ ಚೇತರಿಸಿಕೊಳ್ಳುವುದು ಅನುಮಾನವಾಗಿದೆ. ಗಾಯದ ನಡುವೆಯೂ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಆಡಿದ್ದರು. ಆದರೆ ಗಾಯ ಉಲ್ಬಣವಾಗಿದ್ದರಿಂದ ಪಂದ್ಯದ ಮಧ್ಯದಲ್ಲೇ ಹೊರನಡೆದಿದ್ದರು.