ಹುಲಿ ಉಗುರು ಧರಿಸಿರುವ ವಿವಾದದಲ್ಲಿ ಪ್ರಭಾವಿಗಳು ತಪ್ಪು ಮಾಡಿದ್ದರೆ ಆವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಪರಿಸರ ಮತ್ತು ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಹುಲಿ ಉಗುರು ವಿವಾದದಲ್ಲಿ ಬಿಗ್ ಬಾಸ್ ಮನೆಯಿಂದ ಹಳ್ಳಿಕಾರ್ ನ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬೆನ್ನಲ್ಲೇ ಹಲವು ಗಣ್ಯರು ಹುಲಿ ಉಗುರು ಪೆಂಡೆಂಟ್ ಧರಿಸಿರುವ ವಿವಾದ ಭುಗಿಲೆದ್ದಿತ್ತು.
ವಿವಾದದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರ್ ಖಂಡ್ರೆ, ವನ್ಯಜೀವಿ ಸಂರಕ್ಷಣಾ ಕಾಯ್ದೆ ಎಲ್ಲರಿಗೂ ಅನ್ವಯ ಆಗುತ್ತದೆ. ನಿಯಮ ಉಲ್ಲಂಘಿಸಿದವರು ಎಷ್ಟೇ ಪ್ರಭಾವಿ ವ್ಯಕ್ತಿಯಾಗಿದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.