ಓವರ್ ಟೇಕ್ ಮಾಡುವ ಆತುರದಲ್ಲಿ ಚಾಲಕನ ನಿಯಂತ್ರಣದ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ಹೊಲಕ್ಕೆ ನುಗ್ಗಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ.
ಗುಡಿಬಂಡೆ ತಾಲೂಕಿನ ಉಪ್ಪಾರಹಳ್ಳಿ ಗ್ರಾಮದ ಬಳಿ ಶುಕ್ರವಾರ ಈ ಘಟನೆ ಸಂಭವಿಸಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದಂತಾಗಿದೆ.
ಬಾಗೇಪಲ್ಲಿಯಿಂದ ಗುಡಿಬಂಡೆಗೆ ಬರುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಲದೊಳಗೆ ನುಗ್ಗಿದೆ. ಘಟನೆಯಲ್ಲಿ ಚಾಲಕನಿಗೂ ಗಾಯಗಳಾಗಿವೆ.
ಗಾಯಾಳುಗಳನ್ನ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓವರ್ ಟೆಕ್ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹೊಲದೊಳಗೆ ನುಗ್ಗಿದೆ.
ಅವಘಢಕ್ಕೆ ಚಾಲಕನ ನಿರ್ಲಕ್ಷ್ಯ ತನವೇ ಕಾರಣ ಎನ್ನಲಾಗಿದ್ದು, ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.