ಭೋಪಾಲ್ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ.
ಈ ಆಸ್ತಿಗಳ ಮೇಲೆ ವಿಧಿಸಲಾದ 2015 ರಲ್ಲಿ ವಿಧಿಸಲಾಗಿದ್ದ, ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್ ತೆಗೆದುಹಾಕಿದೆ. ಇದರಿಂದಾಗಿ 1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ದಾರಿ ಮಾಡಿಕೊಟ್ಟಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಡಿ. 13 ರಂದು, 2017ರ ತಿದ್ದುಪಡಿ ಮಾಡಿದ ಶತ್ರು ಆಸ್ತಿ ಕಾಯ್ದೆ ಅಡಿ ಶಾಸನಬದ್ಧ ಪರಿಹಾರವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ದಿನಗಳ ಪ್ರಾತಿನಿಧ್ಯ ಸಲ್ಲಿಸಬೇಕೆಂದು ಪಟೌಡಿ ಕುಟುಂಬಕ್ಕೆ ಸೂಚಿಸಿತ್ತು.
ಇಂದಿನಿಂದ ಈ ಆದೇಶಕ್ಕೆ ಸಂಬಂಧಿಸಿಂತೆ 30 ದಿನಗಳ ಒಳಗಡೆ ಮೇಲ್ಮನವಿ ಸಲ್ಲಿಸದೇ ಇದ್ದರೆ ಕೋರ್ಟ್ ಆದೇಶ ಪ್ರಕಟಿಸುವುದಿಲ್ಲ. ಒಂದು ವೇಳೆ ಸಲ್ಲಸದೇ ಇದ್ದರೆ ಕೋರ್ಟ್ ತತನ್ನದೇ ಆದ ಆರ್ಹತೆಯ ಆಧಾರದ ಮೇಲೆ ಮೇಲ್ಮನವಿಯನ್ನು ಪರಿಗಣಿಸುತ್ತದೆ ಎಂದು ಹೇಳಿತ್ತು. ಇಲ್ಲಿಯವರೆಗೆ ಪಟೌಡಿ ಕುಟುಂಬಸ್ಥರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರಾ ಇಲ್ಲವೋ ತಿಳಿದು ಬಂದಿಲ್ಲ.
ಭೋಪಾಲ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು ಈ ವಿಷಯದ ಬಗ್ಗೆ ಹೈಕೋರ್ಟ್ ಆದೇಶ ಸ್ಪಷ್ಟವಾದ ನಂತರವೇ ಯಾವುದೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.