Month: June 2025

ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವು..!

ಉತ್ತರಾಖಂಡ : ತೀವ್ರ ಮಳೆ ಮತ್ತು ಗುಡ್ಡ ಕುಸಿತದ ಕಾರಣಗಳಿಂದ ನಿಷೇಧ ಹೇರಲಾಗಿದ್ದ, ಚಾರ್‌ಧಾಮ್ ಯಾತ್ರೆ ಮತ್ತೆ ಪುನಾರಂಭಗೊಂಡಿದೆ. ಮಳೆ ಪ್ರಮಾಣ ತಗ್ಗಿದ ಹಿನ್ನೆಲೆ ಯಾತ್ರೆಗೆ ಮತ್ತೆ ಅವಕಾಶ ಮಾಡಿಕೊಡುವಂತೆ ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ಆದೇಶ ಹೊರಡಿಸಿದ್ದಾರೆ.…

ಇಂದು ಸುರ್ಜೇವಾಲ ಜೊತೆ ಒನ್ ಟು ಒನ್ ಮೀಟಿಂಗ್‌..!

ಬೆಂಗಳೂರು : ಸೆಪ್ಟೆಂಬರ್ ಕ್ಷಿಪ್ರಕ್ರಾಂತಿಯ ಸದ್ದು ಜೋರಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಇಂದು ಅಸಮಾಧಾನಗೊಂಡಿರುವ ಶಾಸಕರ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಬಿ.ಆರ್ ಪಾಟೀಲ್, ರಾಜು ಕಾಗೆ ಬಹಿರಂಗ ಹೇಳಿಕೆಯಿಂದ ಸರ್ಕಾರಕ್ಕೆ ಡ್ಯಾಮೇಜ್ ಉಂಟಾಗಿದ್ದು, ಇದಕ್ಕೆ ತೇಪೆ…

ಕಬಿನಿಯಿಂದ ನೀರು ಬಿಡುಗಡೆ – ಭತ್ತದ ಬೆಳೆ ಮುಳುಗಡೆ

ಮೈಸೂರು : ಕಬಿನಿ ಜಲಾಶಯದ ಒಳ ಹರಿವು ಹೆಚ್ಚಾದ ಹಿನ್ನೆಲೆ ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಸುತ್ತಿರುವ ಪರಿಣಾಮ ಕಪಿಲಾ ನದಿ ಉಕ್ಕಿ ಭತ್ತದ ಬೆಳೆ ಸಂಪೂರ್ಣ ಮುಳುಗಡೆಯಾಗಿದೆ. ಕೇರಳದ ವಯನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಮೈಸೂರು ಜಿಲ್ಲೆಯ ಹೆಚ್‌ಡಿ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಅಣ್ಣಾಮಲೈ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಕುಕ್ಕೆಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿ ಅಣ್ಣಾಮಲೈ ಬಳಿಕ ಶ್ರೀ ವಿದ್ಯಾ ಪ್ರಸನ್ನ…

ಮೊದಲ ಬಾರಿಗೆ ಆರ್‌ಬಿಐ ʼಚಿನ್ನದ ಖಜಾನೆʼ ಅನಾವರಣ..!

ಮುಂಬೈ : ಮೊದಲ ಬಾರಿಗೆ ಭಾರತದ ಕೇಂದ್ರೀಯ ಬ್ಯಾಂಕ್ ಆರ್‌ಬಿಐ ಸಾಕ್ಷ್ಯಚಿತ್ರವೊಂದನ್ನು ಹೊರತಂದಿದೆ. ಈ ಮೂಲಕ ತನ್ನ ಚಿನ್ನದ ಖಜಾನೆಯೊಂದನ್ನು ಅನಾವರಣಗೊಳಿಸಿದೆ. ಇಲ್ಲಿಯವರೆಗೆ ಸಾರ್ವಜನಿಕರಿಗೆ ಆರ್‌ಬಿಐ ದೇಶದ ಸಂಪತ್ತನ್ನು ನಗದು ರೂಪದಲ್ಲಿ ಮಾತ್ರವಲ್ಲದೆ, ಚಿನ್ನದ ರೂಪದಲ್ಲೂ ಇಟ್ಟುಕೊಂಡಿರುತ್ತದೆ ಎಂಬುದಷ್ಟೇ ತಿಳಿದಿತ್ತು. ಆದರೆ…

ಮಹಾರಾಷ್ಟ್ರದ ಪ್ರದೇಶದಲ್ಲಿ ಧಾರಾಕಾರ ಮಳೆ – ಗೋಕಾಕ್ ಜಲಪಾತಕ್ಕೆ ಜೀವಕಳೆ

ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಪ್ರಸಿದ್ಧ ಗೋಕಾಕ್ ಜಲಪಾತಕ್ಕೆ ಜೀವಕಳೆ ಬಂದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ಬಳಿ ಇರುವ ಜಲಪಾತ ಸದ್ಯ ತನ್ನ ಜಲವೈಭವದಿಂದ ಜನರ ಕಣ್ಮನ ಸೆಳೆಯುತ್ತಿದೆ. ಭಾರತದ ನಯಾಗರ ಫಾಲ್ಸ್ ಎಂದೇ…

ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ – ಪಂಚಾಯತ್‌ ಸದಸ್ಯ ಅರೆಸ್ಟ್‌ !

ಬೆಳಗಾವಿ : ರಸ್ತೆ ಮಧ್ಯೆ ಗಾಳಿಯಲ್ಲಿ ಗುಂಡು ಹಾರಿಸಿ ಗ್ರಾಮ ಪಂಚಾಯತ್‌ ಸದಸ್ಯನೊಬ್ಬ ಹುಟ್ಟು ಹಬ್ಬ ಆಚರಿಸಿದ ಘಟನೆ ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ನಡೆದಿದೆ. ಕುಡಚಿ ಪಟ್ಟಣದ ಗ್ರಾಮ ಪಂಚಾಯತಿ ಸದಸ್ಯ ಬಾಬಾಜಾನ್ ಖಾಲಿಮುಂಡಾಸೈ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು…

ಹಠಾತ್ ಪ್ರವಾಹ; ಉತ್ತರಾಖಂಡದಲ್ಲಿ ಮೇಘಸ್ಫೋಟ – 9 ಕಾರ್ಮಿಕರು ನಾಪತ್ತೆ !

ಡೆಹ್ರಾಡೂನ್ : ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು ಹಠಾತ್ ಪ್ರವಾಹ ಉಂಟಾದ ಪರಿಣಾಮ ಉತ್ತರಕಾಶಿ ಬಳಿ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದೆ. ಕಾರ್ಮಿಕರು ಪ್ರಹಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡ ರಕ್ಷಣಾ…

ಕೆಆರ್‌ಎಸ್ ಡ್ಯಾಂ ಭರ್ತಿ – ನಾಳೆ ಅಣೆಕಟ್ಟೆಗೆ ಬಾಗಿನ ಅರ್ಪಿಸುವ ಸಿಎಂ

ಮಂಡ್ಯ : ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ಈ ಹಿನ್ನೆಲೆ ಸೋಮವಾರ ಸಿಎಂ ಸಿದ್ದರಾಮಯ್ಯ ಕಾವೇರಿ ಬಾಗಿನ ಅರ್ಪಿಸಿ ಜೂನ್‌ನಲ್ಲಿ ಬಾಗಿನ ಅರ್ಪಿಸಿದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.…

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಮತ್ತೆ ಕಾಲ್ತುಳಿತ – ಮೂವರು ಸಾವು, 10 ಮಂದಿಗೆ ಗಾಯ !

ಭುವನೇಶ್ವರ : ಇಂದು ಮುಂಜಾನೆ 4:30ರ ವೇಳೆಗೆ ಘಟನೆ ನಡೆದಿದೆ. ಗುಂಡಿಚಾ ದೇವಾಲಯದ ಬಳಿ ರಥಯಾತ್ರೆಯನ್ನು ಕಣ್ತುಂಬಿಕೊಳ್ಳಲು ಭಕ್ತ ಸಮೂಹವೇ ಸೇರಿತ್ತು. ರಥಗಳು ಭಕ್ತರನ್ನು ಸಮೀಪಿಸುತ್ತಿದ್ದಂತೆ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಉಂಟಾಗಿದೆ. ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿ…