ಬೆಂಗಳೂರು : ಕರ್ನಾಟಕ ಮಾಹಿತಿ ಆಯೋಗಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಹಾಗೂ ರಾಜ್ಯ ಮಾಹಿತಿ ಆಯುಕ್ತರುಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾಜಭವನದ ಗಾಜಿನಮನೆಯಲ್ಲಿ ನಡೆಯಿತು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧನೆ ಮಾಡಿದರು. ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಆಶಿತ್ ಮೋಹನ್ ಪ್ರಸಾದ್ ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಜ್ಯ ಮಾಹಿತಿ ಆಯುಕ್ತರಾಗಿ ಮಾಜಿ ಉದ್ಯೋಗಿ ಬದ್ರುದ್ದೀನ್ ಕೆ.ಮಾಣಿ, ಕೆ. ರಮಣ್, ಡಾ.ಹರೀಶ್‌ಕುಮಾರ್, ನಾರಾಯಣ್ ಜಿ. ಚನ್ನಾಳ್, ನಿವೃತ್ತ ಐಎಎಸ್ ಅಧಿಕಾರಿ ಬಿ.ಆರ್. ಮಮತಾ, ಹಿರಿಯ ಪತ್ರಕರ್ತರಾದ ರುದ್ರಣ್ಣ ಹರ್ತಿಕೋಟೆ, ಎಸ್. ರಾಜಶೇಖರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.