8ನೇ ಬಾರಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಅವರು, ಈ ಮೂಲಕ ದಾಖಲೆ ಬರೆಯಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಫೆ. 2024 ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು ಏಳು ಬಜೆಟ್ಗಳನ್ನು ಮಂಡಿಸಿದ್ದಾರೆ.
ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತ ಎಂಟು ವರ್ಷಗಳ ಕಾಲ ಕೇಂದ್ರ ಬಜೆಟ್ ಅನ್ನು ಮಂಡಿಸುವುದರ ಮೂಲಕ ದಾಖಲೆ ಬರೆಯಲು ನಿರ್ಮಲಾ ಅವರು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮತಿ ನೀಡಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಸಂಪುಟ ಸಭೆ ಆರಂಭವಾಗಲಿದೆ.
ಬೆಳಗ್ಗೆ 10.25ಕ್ಕೆ ಸಂಸತ್ ಭವನದಲ್ಲಿ ಸಂಪುಟ ಸಭೆ ನಡೆಯಲಿದ್ದು, ಬಜೆಟ್ಗೆ ಅನುಮೋದನೆ ದೊರೆಯಲಿದೆ.
ರಾಷ್ಟ್ರಪತಿ ಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.
ರಾಷ್ಟ್ರಪತಿ ಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.
ಕೇಂದ್ರ ಸರ್ಕಾರದ 2025-2026ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇದರೊಂದಿಗೆ ಸತತ 8ನೇ ಬಜೆಟ್ ಮಂಡಿಸಿದ ಮೊದಲ ಸಚಿವೆ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.