ಅಕ್ರಮ ವಲಸಿಗರನ್ನು ದೇಶಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಹೊಸದಲ್ಲ ಮತ್ತು ಎಲ್ಲಾ ದೇಶಗಳು ತಮ್ಮ ಪ್ರಜೆಗಳು ವಿದೇಶದಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ಅಕ್ರಮ ವಲಸೆಯನ್ನು ತಡೆಯುವಂತೆಯೂ ಅವರು ಕರೆ ನೀಡಿದರು. ದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ, ತಮ್ಮ ಪ್ರಜೆಗಳನ್ನು ವಾಪಸ್ ಕರೆದುಕೊಳ್ಳುವುದು ಎಲ್ಲಾ ದೇಶಗಳ ಬಾಧ್ಯತೆಯಾಗಿದೆ ಎಂದು ಸಚಿವರು ಹೇಳಿದರು.
ತಮ್ಮ ದೇಶದಲ್ಲಿ ಅಕ್ರಮ ವಲಸಿಗರು ಇದ್ದರೆ ವಾಪಸ್ ಕಳುಹಿಸುತ್ತಾರೆ, ಈ ಪ್ರಕ್ರಿಯೆಯು ಸಾಮಾನ್ಯವಾಗಿ ಎಲ್ಲಾ ದೇಶಗಳಲ್ಲೂ ಇದೆ, ಅಮೆರಿಕದಲ್ಲಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡುತ್ತಿದ್ದಾರೆ, ಈ ಪ್ರಕ್ರಿಯೆ 2009ರಿಂದಲೂ ಇದೆ ಎಂದು ಹೇಳಿದ್ದಾರೆ.
ಬುಧವಾರ ಅಮೆರಿಕದಿಂದ ಗಡಿಪಾರು ಮಾಡಲಾದ 104 ಭಾರತೀಯ ಅಕ್ರಮ ಭಾರತೀಯ ವಲಸಿಗರ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಜೈಶಂಕರ್ ಅವರು ಈ ಹೇಳಿಕೆಗಳನ್ನು ನೀಡಿದರು. ಗಡಿಪಾರಾದವರು ಮನೆಗೆ ಹಿಂದಿರುಗುವಾಗ ಕೆಟ್ಟದಾಗಿ ನಡೆಸಿಕೊಳ್ಳದಂತೆ ನೋಡಿಕೊಳ್ಳಲು ಅಮೆರಿಕದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ರಾಜತಾಂತ್ರಿಕರು ಹೇಳಿದರು.