ಮೈಸೂರು : ಮೈಸೂರು ನಗರದಲ್ಲಿ ನಿನ್ನೆ ರಾತ್ರಿ ನಡೆದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಮಾಧ್ಯಮಗಳ ಜೊತೆ ಮಾತಾಡಿದ ಅವರು ವಾಟ್ಸ್ಯಾಪ್ ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಮತ್ತು ಅಖಿಲೇಶ್ ಯಾದವ್ ಅವರ ಫೋಟೋಗಳನ್ನು ಹಾಕಿ 3 ಈಡಿಯಟ್ಸ್ ಎಂದು ಬರೆದಿರುವುದಕ್ಕೆ ರೊಚ್ಚಿಗೆದ್ದ ಕೆಲ ಮುಸಲ್ಮಾನ ಪುಂಡರು ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ ಎಂದು ಹೇಳಿದರು.
ಪೋಸ್ಟ್ ಹಾಕಿದವರನ್ನು ಅರೆಸ್ಟ್ ಮಾಡಿದ್ದಾಗಿ ಪೊಲೀಸರು ಹೇಳಿದರೂ ಕಲ್ಲು ತೂರಾಟವನ್ನು ಪುಂಡರು ನಿಲ್ಲಿಸಿಲ್ಲ, ಉದಯಗಿರಿ ಪೊಲೀಸ್ ಠಾಣೆ ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವ ಕೆಲಸ ಕಳೆದ 15 ವರ್ಷಗಳಿಂದ ನಡೆಯುತ್ತಿದೆ ಎಂದು ಬಿಜೆಪಿ ನಾಯಕ ಹೇಳಿದರು.