ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ರಾಜ್ಯ ಕಾಂಗ್ರೆಸ್​ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಧ್ಯಕ್ಷ ಸ್ಥಾನದಲ್ಲಿ ಕೂರಲು ಕಾಂಗ್ರೆಸ್​ನಲ್ಲೇ ಸದ್ದಿಲ್ಲದೆ ಪೈಪೋಟಿ ಶುರುವಾಗಿದೆ.

ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ನೀಡಿದ್ದಾರೆ. ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತೆ ಎಂದರು.

ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಆಗಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಒಂದೆರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಬದಲಾವಣೆ. 8 ದಿನಗಳಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತೆ ಎಂದು ಹೇಳಿದರು.

Leave a Reply

Your email address will not be published. Required fields are marked *