ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ ಸರಿಯಾಗಿ 6 ವರ್ಷಗಳ ಹಿಂದೆ ಭಾರತೀಯ ಸೇನೆ ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಲಾಗಿತ್ತು.
ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ ದಿನ ಎಂದೇ ಹೇಳಬಹುದು. 5 ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು. ಈ ಸುದ್ದಿ ಕೇಳಿ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು.

ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಯ ಮೇಲೆ ಭೀಕರವಾಗಿ ದಾಳಿ ನಡೆಸಲಾಗಿತ್ತು. ಈ ಕರಾಳ ಘಟನೆಯ ಬಗ್ಗೆ ನೆಟ್ಟಿಗರು #BlackDay ಹೆಸರಿನಲ್ಲಿ ಪೋಸ್ಟ್ ಮಾಡಿ ವೀರ ಯೋಧರ ಬಲಿದಾನವನ್ನು ಸ್ಮರಿಸುತ್ತಿದ್ದಾರೆ ಎಂದು ಹೇಳಲಾಗಿದೆ.
14 ಫೆಬ್ರವರಿ 2019 : ಜಮ್ಮು ಮತ್ತು ಕಾಶ್ಮೀರದಲ್ಲಿ 40 ಸಿಆರ್ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ 2 ಬಸ್ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು.
ಈ ದಾಳಿಯ ಸ್ವಲ್ಪ ಸಮಯದ ನಂತರ ಜೈಶ್-ಇ-ಮೊಹಮ್ಮದ್ ಸಂಘಟನೆ ವೀಡಿಯೋ ಬಿಡುಗಡೆ ಮಾಡಿತು. ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದರು ಎನ್ನಲಾಗಿದೆ.