ಪ್ರಯಾಗ್ರಾಜ್ : 144 ವರ್ಷಗಳ ಬಳಿಕ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ನಾಳೆ ತೆರೆಬೀಳಲಿದೆ. ನಾಳೆ ಶಿವರಾತ್ರಿ ಹಿನ್ನೆಲೆ ಕೊನೆಯ ಪುಣ್ಯಸ್ನಾನಕ್ಕೆ ಸ್ಥಳೀಯ ಆಡಳಿತ ತಯಾರಿ ನಡೆಸುತ್ತಿದೆ.
ಕೊನೆಯ ಪುಣ್ಯಸ್ನಾನದ ಹಿನ್ನೆಲೆ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್ ಝೋನ್ ಎಂದು ಘೋಷಿಸಲಾಗಿದೆ. ಇಂದು ಮತ್ತು ನಾಳೆ ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಸ್ಥಳೀಯ ಆಡಳಿತ ಮತ್ತು ವೈದ್ಯಕೀಯ ತುರ್ತು ಸೇವೆಗಳ ವಾಹನಗಳಿಗೆ ಮಾತ್ರ ಪ್ರವೇಶವಿರುವುದು ಎಂದು ಸ್ಥಳೀಯ ಆಡಳಿತ ತಿಳಿಸಿದೆ.
ಈವರೆಗೂ 63 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಅಮೃತಸ್ನಾನ ಮಾಡಿದ್ದು, ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶ್ವದಾದ್ಯಂತ ಕೋಟ್ಯಂತರ ಭಕ್ತರು ಭೇಟಿ ನೀಡಿದ್ದಾರೆ. ವಿಶ್ವವಿಖ್ಯಾತ ಮಹಾ ಕುಂಭಮೇಳ ಫೆ.26 ರಂದು ಅಂತ್ಯಗೊಳ್ಳಲಿದೆ.