ಬೆಂಗಳೂರು : ನಗರದಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಸಮೀಕ್ಷೆ ಮೂಲಕ ಗುರುತಿಸಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ, ಕಲ್ಯಾಣ ಕಾರ್ಯಕ್ರಮಗಳು, ಬೀದಿ ಬದಿ ವ್ಯಾಪಾರಿಗಳು, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ, ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿ ಸುಮಾರು 27 ಸಾವಿರ ಮಂದಿ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಲಾಗಿದೆ. ಎಲ್ಲರಿಗೂ ಶೀಘ್ರವಾಗಿ ಗುರುತಿನ ಚೀಟಿ ವಿತರಣೆ ಮಾಡಿ ಎಂದು ಹೇಳಿದರು.
ಬೀದಿ ಬದಿ ವ್ಯಾಪಾರಿಗಳಿಗೆ ನೀಡುವ ಗುರುತಿನ ಚೀಟಿ ಯಾವ ಮಾದರಿಯಲ್ಲಿ ಇರಬೇಕೆಂದು ಅಂತಿಗೊಳಿಸಿ. ಗುರುತಿನ ಚೀಟಿ ನೀಡಿದ ಬಳಿಕ ಗುರುತಿಸಿರುವಂತಹ ವ್ಯಾಪಾರ ವಲಯಗಳಲ್ಲಿ, ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಅನುವು ಮಾಡಿಕೊಬೇಕು ಎಂದು ಸೂಚಿಸಿದರು.