ಬೆಂಗಳೂರು : ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣ, ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯ ಒದಗಿಸಲು 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದರು.

ದೇಶದಾದ್ಯಂತ ವಕ್ಫ್ ಆಸ್ತಿ ವಿಚಾರ ಚರ್ಚೆಯಲ್ಲಿರುವ ಮತ್ತು ರಾಜ್ಯದಲ್ಲಿ ಅನೇಕ ರೈತರ ಜಮೀನಿಗೆ ಸಂಬಂಧಿಸಿ ವಕ್ಫ್ ಆಸ್ತಿ ಎಂಬ ನೋಟಿಸ್ ಬಂದಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಬಜೆಟ್​​ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

ಮೌಲಾನಾ ಆಜಾದ್ ಪಬ್ಲಿಕ್ ಶಾಲೆ ಅಭಿವೃದ್ದಿ ಅಡಿ ಆಯ್ದ 100 ಉನ್ನತ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು 400 ಕೋಟಿ ರೂ. ಅನುದಾನ ನೀಡಲಾಗುತ್ತಿದ್ದು, ಈ ವರ್ಷ 100 ಕೋಟಿ ರೂ. ಬಿಡುಗಡೆ ಮಾಡಲಾಗುವುದು.ಮದರಸ ಶಿಕ್ಷಣ ಬಲಪಡಿಸುವ ಯೋಜನೆಯಡಿ ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಮತ್ತಿತರ ಸೌಲಭ್ಯಗಳೊಂದಿಗೆ NIOS ಮುಖಾಂತರ SSLC ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಮೂಲಕ ಉದ್ಯೋಗ ಹಾಗೂ ತರಬೇತಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಉಳ್ಳಾಲದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಕಾಲೇಜು ನಿರ್ಮಾಣ​ವಾಗಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *