ಮುಂಬೈ : ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ದಪ್ಪಗಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಟೀಕೆಗೆ ಗುರಿಯಾಗಿದ್ದರು. ಇಂದು ಅದೇ ರೋಹಿತ್ ಪಡೆಯನ್ನು ಕಾಂಗ್ರೆಸ್ ನಾಯಕಿ ಹಾಡಿಹೊಗಳಿದ್ದಾರೆ.
ದುಬೈನಲ್ಲಿ 2025 ರ ಚಾಂಪಿಯನ್ಸ್ ಟ್ರೋಫಿ ಗೆದ್ದ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ತಂಡವನ್ನು ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಅಭಿನಂದಿಸಿದ್ದಾರೆ.
ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಶಮಾ ಅವರು, ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ತಂಡಕ್ಕೆ ಅಭಿನಂದನೆಗಳು. 76 ರನ್ ಬಾರಿಸಿ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ ಕ್ಯಾಪ್ಟನ್ ರೋಹಿತ್ ಶರ್ಮಾ ಅವರಿಗೆ ಹ್ಯಾಟ್ಸಾಫ್. ಶ್ರೇಯಸ್ ಐಯ್ಯರ್, ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿ, ಟೀಂ ಇಂಡಿಯಾವನ್ನು ಜಯದತ್ತ ಕೊಂಡೊಯ್ದರು ಎಂದು ಶ್ಲಾಘಿಸಿದ್ದಾರೆ.