ಸ್ಯಾಂಡಲ್‌ವುಡ್ ನಟ ದರ್ಶನ್ ಮತ್ತು ಮದರ್ ಇಂಡಿಯಾ ಸುಮಲತಾ ನಡುವೆ ಬಿರುಕು ಮೂಡಿದ್ಯಾ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ.

ಮದರ್ ಇಂಡಿಯಾ ಸೇರಿ ದರ್ಶನ್ ಎಲ್ಲರನ್ನೂ ಇನ್ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಹಂಚಿಕೊಂಡಿರುವ ಮತ್ತೊಂದು ಪೋಸ್ಟ್ ಈಗ ಇಬ್ಬರ ನಡುವಿನ ಬಿರುಕಿನ ಬಗ್ಗೆ ಚರ್ಚೆ ಹುಟ್ಟುಹಾಕುವಂತೆ ಮಾಡಿದೆ.

ಮತ್ತೊಂದು ಮಾರ್ಮಿಕ ಸಂದೇಶವೊಂದನ್ನು ನಟಿ ಹಂಚಿಕೊಂಡಿದ್ದಾರೆ. ನೋವಿಲ್ಲದಂತೆ ಎದ್ದು ಬರುವುದು, ಚಿಂತೆ ಇಲ್ಲದಂತೆ ಇರೋದು. ನಿಮ್ಮನ್ನು ಯಾರು ಅರ್ಥ ಮಾಡಿಕೊಳ್ತಾರೋ ಅಂಥವರ ಜೊತೆಗೆ ಇರೋದು. ಇವೆಲ್ಲಾ ಸಾಮಾಜಿಕ ಮಾಧ್ಯಮದಲ್ಲಿ ತೋರಿಸಲಾಗದ ಖಜಾನೆ ಎಂದು ಇನ್ಸ್ಟಾಗ್ರಾಂ ಪೋಸ್ಟ್ ಶೇರ್ ಮಾಡಿದ್ದಾರೆ.

ಜೈಲಿನಲ್ಲಿದ್ದಾಗ ತನ್ನ ಬೆನ್ನಿಗೆ ಸುಮಲತಾ ನಿಲ್ಲಲಿಲ್ಲ ಅಂತ ದರ್ಶನ್ ಕೋಪವಿದ್ಯಾ? ಎಂದೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ ಎನ್ನಲಾಗಿದೆ.

ಈ ಹಿಂದಿನ ಪೋಸ್ಟ್‌ನಲ್ಲಿ, ಬೆಸ್ಟ್ ಆಕ್ಟಿಂಗ್ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತೆ ಅಂದ್ರೆ.. ಯಾರು ಸತ್ಯವನ್ನ ತಿರುಚುತ್ತಾರೋ, ತಮ್ಮದೇ ತಪ್ಪು ಇಟ್ಕೊಂಡು ಬೇರೆಯವರ ಮೇಲೆ ಹಾಕಿ ನೋವು ಮಾಡೋದು, ತಮ್ಮ ಮೇಲಿನ ನಿಂದನೆಯನ್ನ ಬೇರೆಯವರ ಮೇಲೆ ಹಾಕೋದು, ಗೂಬೆ ಕೂರಿಸೋದು ಮಾಡಿ ತಮ್ಮನ್ನ ತಾವು ಹೀರೋ ಎಂಬಂತೆ ಬಿಂಬಿಸಿಕೊಳ್ಳೋದು ಎಂದು ಸುಮಲತಾ ಅವರು ಪೋಸ್ಟ್ ಮಾಡಿದ್ದರು.

ತಾಯಿ ಸಮಾನರಾದ ಸುಮಲತಾ, ತಮ್ಮನ ಸಮಾನರಾದ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಅವರು ಸೇರಿದಂತೆ ಆರು ಮಂದಿ ಆಪ್ತರನ್ನು ನಟ ದರ್ಶನ್ ಇನ್ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ದಾರೆ. ದರ್ಶನ್ ಈ ನಡೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ಆರು ಮಂದಿಯನ್ನು ದರ್ಶನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಫಾಲೋ ಮಾಡುತ್ತಿದ್ದರು. ಆದರೆ, ಈಗ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ 0 ಫಾಲೋ ಇದೆ. ಈ ಬೆಳವಣಿಗೆ ಫ್ಯಾನ್ಸ್ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಮೂಡಿಸಿದೆ.

Leave a Reply

Your email address will not be published. Required fields are marked *