ಮಂಗಳೂರು : ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು 13 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನ ಮೇರಿಹಿಲ್‍ನ ಮಾತಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ.

ಮೃತ ಬಾಲಕನನ್ನು ಸುದೇಶ್ ಭಂಡಾರಿ ಎಂಬವರ ಪುತ್ರ ಸಮರ್ಜಿತ್ ಎಂದು ಗುರುತಿಸಲಾಗಿದೆ. ಬಾಲಕ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಆಕಸ್ಮಿಕವಾಗಿ ಐದನೇ ಮಹಡಿಯಿಂದ ಬಿದ್ದ ಪರಿಣಾಮ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದೆ.

ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ಎಂದು ದಾಖಲಾಗಿದೆ.

Leave a Reply

Your email address will not be published. Required fields are marked *