ಅನ್ನಭಾಗ್ಯ ಜಾರಿಗೆ ಎದುರಾಗಿರುವ ಅಕ್ಕಿ ಸಮಸ್ಯೆ ನಿವಾರಿಸಲು ರಾಜ್ಯ ಆಹಾರ ಇಲಾಖೆ ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್ಘಡ್, ಮಧ್ಯಪ್ರದೇಶ ರಾಜ್ಯಗಳನ್ನ ಸಂಪರ್ಕ ಮಾಡಿದೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ತೆಲಂಗಾಣದ ಸಿಎಂಗೆ ಕರೆ ಮಾಡಿ ಅಕ್ಕಿ ಪೂರೈಕೆಗೆ ಮನವಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ(Congress Government) ಮಹತ್ವದ ಐದು ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆ(Anna Bhagya Scheme) ಇದೇ ಜುಲೈ 1 ರಂದು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ(Central Government) ನಿರಾಕರಿಸಿದೆ. ಹೀಗಾಗಿ ಜುಲೈ 1ರಂದು ಈ ಯೋಜನೆ ಜಾರಿಯಾಗುವುದು ಬಹುತೇಕ ಡೌಟ್ ಆಗಿದ್ದು ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಅಕ್ಕ ಪಕ್ಕದ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಜೊತೆ ಅಕ್ಕಿ ಖರೀದಿಗೆ ಮಾತುಕತೆ ನಡೆಸಿದೆ. ಅಲ್ಲದೆ ಸಿಎಂ ಸಿದ್ದರಾಮಯ್ಯ(Siddaramaiah) ತೆಲಂಗಾಣದ ಸಿಎಂಗೆ ಕರೆ ಮಾಡಿ ಅಕ್ಕಿ ಪೂರೈಕೆಗೆ ಮನವಿ ಮಾಡಿದ್ದಾರೆ.