ರಾಜ್ಯಾದ್ಯಂತ ಮುಂಗಾರು(Monsoon) ದುರ್ಬಲಗೊಂಡಿದೆ, ಆದರೂ ಒಂದು ದಿನ ಮಳೆ(Rain) ಬಂದರೆ ಮತ್ತೊಂದು ದಿನ ಬಿಡುವು ಪಡೆದುಕೊಳ್ಳುತ್ತಿದೆ. ಬಿಟ್ಟೂ ಬಿಟ್ಟು ಬರುತ್ತಿದೆ.
ಮಳೆ
ರಾಜ್ಯಾದ್ಯಂತ ಮುಂಗಾರು(Monsoon) ದುರ್ಬಲಗೊಂಡಿದೆ, ಆದರೂ ಒಂದು ದಿನ ಮಳೆ(Rain) ಬಂದರೆ ಮತ್ತೊಂದು ದಿನ ಬಿಡುವು ಪಡೆದುಕೊಳ್ಳುತ್ತಿದೆ. ಬಿಟ್ಟೂ ಬಿಟ್ಟು ಬರುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 2ರವರೆಗೂ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಬಸವಕಲ್ಯಾಣ, ಮಂಗಳೂರು, ಕೋಟ, ಕುಂದಾಪುರ, ಅಂಕೋಲಾ, ಕ್ಯಾಸಲ್ರಾಕ್, ಕೊಟ್ಟಿಗೆಹಾರ, ಉಡುಪಿ, ಕಾರ್ಕಳ, ಕಾರವಾರ, ಗುಂಜಿ, ಪುತ್ತೂರು, ಧರ್ಮಸ್ಥಳ, ಸುಬ್ರಹ್ಮಣ್ಯ, ಸಿದ್ದಾಪುರ, ಹೊನ್ನಾವರ, ಗೋಕರ್ಣ, ಬೇಲಿಕೇರಿ, ಲೋಂಡಾ, ಕಲಘಟಗಿ, ಭಾಲ್ಕಿ, ನಿಟ್ಟೂರು, ಸಕಲೇಶಪುರದಲ್ಲಿ ಮಳೆಯಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.