ಗಾಜಾ ಮೇಲೆ ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿದರೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಉಗ್ರರು ಷರತ್ತು ವಿಧಿಸಿದ್ದಾರೆ.
ಇಸ್ರೇಲ್ ನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು 250ಕ್ಕೂ ಅಧಿಕ ನಾಗರಿಕರನ್ನು ಹಮಾಸ್ ಉಗ್ರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಅಲ್ಲದೇ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಮಹಿಳೆಯೊಬ್ಬರ ವೀಡಿಯೋ ಬಿಡುಗಡೆ ಮಾಡಿದ್ದರು.
ಹಮಾಸ್ ಸಂಘಟನೆಯ ಮುಖಂಡರೊಬ್ಬರು ಸುದ್ದಿ ಸಂಸ್ಥೆಗೆ ನೀಡಿದ ಮಾಹಿತಿಯಲ್ಲಿ ಗಾಜಾ ಮೇಲೆ ಇಸ್ರೇಲ್ ನಡೆಸುತ್ತಿರುವ ವಾಯುದಾಳಿಯನ್ನು ನಿಲ್ಲಿಸಿದ ಕೂಡಲೇ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಇಸ್ರೇಲ್ ಗಾಜಾ ಮೇಲೆ ವಾಯುದಾಳಿ ನಡೆಸಿತ್ತು. ಇದರಿಂದ ಗಾಜಾದಲ್ಲಿ ಸಾಕಷ್ಟು ಹಾನಿಯಾಗಿದ್ದು, ಆಸ್ಪತ್ರೆ ಮೇಲೆ ನಡೆದ ದಾಳಿಯಲ್ಲಿ ೫೦೦ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.