ಆರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿರುವ ಪಾಕಿಸ್ತಾನದಲ್ಲಿ ಇದೀಗ ಇಂಧನ ಕೊರತೆ ಕಾಡುತ್ತಿದ್ದು, 48 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ.
ಇಂಧನ ಕೊರತೆ ಹಿನ್ನೆಲೆಯಲ್ಲಿ ಪಾಕಿಸ್ತಾನ ಅಂತಾರಾಷ್ಟ್ರೀಯ ಏರ್ ಲೈನ್ಸ್ ನ ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ 48 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ.
ಇಂಧನ ಸಂಗ್ರಹ ಸೀಮಿತವಾಗಿರುವುದರಿಂದ ನಿಗದಿತ ಹಾಗೂ ಸೀಮಿತ ವಿಮಾನಗಳ ಹಾರಾಟಕ್ಕೆ ಮಾತ್ರ ಆದ್ಯತೆ ನೀಡಲಾಗಿದೆ. 13 ದೇಶೀಯ ಹಾಗೂ 11 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧಿಸಲಾಗಿದೆ.
ವಿಮಾನ ಹಾರಾಟ ವ್ಯತ್ಯಯ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಪರ್ಯಾಯ ಮಾರ್ಗ ಅಥವಾ ವಿಮಾನಗಳ ಬಳಕೆಗೆ ಸೂಚಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪಾಕಿಸ್ತಾನ ವಿಮಾನಯಾನ ಸಂಸ್ಥೆಯ ಕಾಲ್ ಸೆಂಟರ್ ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಬುಧವಾರ 22ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇದರಲ್ಲಿ 16 ಅಂತಾರಾಷ್ಟ್ರೀಯ ಹಾಗೂ 8 ದೇಶೀಯ ವಿಮಾನಗಳು ಸೇರಿದ್ದವು.