ಡಿಸಿಎಂ ಡಿಕೆ ಶಿವಕುಮಾರ್ ಆಪರೇಷನ್ ಹಸ್ತ ಮುಂದುವರಿಸಿದ್ದು, ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆಪ್ತ, ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ತುಮಕೂರು ಮಾಜಿ ಶಾಸಕ ಎಸ್.ಶಫಿ ಅಹ್ಮದ್ ಕಾಂಗ್ರೆಸ್ ಸೇರ್ಪಡೆಯಾದರು.
ಎಂ ಶ್ರೀಕಾಂತ್ ಜೊತೆ ಜೆಡಿಎಸ್ನ ಕೆಲ ಪದಾಧಿಕಾರಿಗಳು ಕಾಂಗ್ರೆಸ್ ಬಾವುಟ ಹಿಡಿದರು. ಈ ವೇಳೆ ಉಪಸ್ಥಿತರಿದ್ದ ಗೀತಾ ಶಿವರಾಜ್ ಕುಮಾರ್ ಮಾತನಾಡಿ, ಸುಮಾರು ವರ್ಷಗಳಿಂದ ನಾನು ಶ್ರೀಕಾಂತ್ ಕೆಲಸ ಮಾಡಿದ್ದೇವೆ. ಬಹಳ ಒಳ್ಳೆಯ ಮನುಷ್ಯ, ಒಳ್ಳೆಯ ರಾಜಕಾರಣಿ ಶ್ರೀಕಾಂತ್. ಕಾಂಗ್ರೆಸ್ಗೆ ಅವರನ್ನ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದರು.