ಯಾರಿಂದಲೂ 1 ರೂ. ಪಡೆದುಕೊಂಡಿಲ್ಲ ಅಂತ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ನೋಡೋಣ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಮನಗರ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಬೇಕಿದ್ದರೇ ಚರ್ಚೆಗೆ ಬರಲಿ, ನಾವು ನಮ್ಮ ಎಂಪಿ ಜೊತೆ ಬರುತ್ತೇವೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚರ್ಚೆಗೆ ಬರ್ತಾರಾ? ಎಂದು ಪ್ರಶ್ನಿಸಿದ್ರು. ಹೆಚ್.ಡಿ.ಕುಮಾರಸ್ವಾಮಿ ಹತಾಶೆಗೊಂಡಿದ್ದಾರೆ. ಕನಕಪುರ ತಾಲೂಕು ಬೆಂಗಳೂರು ನಗರ ಜಿಲ್ಲೆಗೆ ಸೇರಿಸುವುದಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಕೇವಲ ಚರ್ಚೆಗೋಸ್ಕರ ಮಾತಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಡುವ ಪ್ರಸ್ತಾಪ ಇದೆ ಅಷ್ಟೇ ಎಂದರು.