ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂದು ಮಾಜಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದರು.
ಕೇದಾರನಾಥದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ವರ್ಷ ಇರಲೆಂಬುದು ನಮ್ಮ ಆಶಯ. ಆದರೆ, ಬಿಟ್ಟಿ ಭಾಗ್ಯಗಳನ್ನು ನೀಡಿ ತಮ್ಮ ತಮ್ಮೊಳಗೆ ಕಚ್ಚಾಡುತ್ತಿರುವ ಕಾಂಗ್ರೆಸ್ ಮುಖಂಡರಿಂದಲೇ ಸರ್ಕಾರ ನೆಲಕಚ್ಚುವ ಸಮಯ ದೂರವಿಲ್ಲ.
ಆಪರೇಷನ್ ಹಸ್ತ ಎಂದು ಕೆಲ ಕಾಂಗ್ರೆಸ್ ನಾಯಕರು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದ್ದು, ಇನ್ನೇನಿದ್ದರೂ ಆಪರೇಷನ್ ಕಮಲ ಖಚಿತ ಎಂದರು.