ಶ್ರೀಲಂಕಾದ ಸಂಘಟಿತ ಪ್ರದರ್ಶನದ ಎದುರು ಮಂಕಾದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಈ ಮೂಲಕ ಹಾಲಿ ಚಾಂಪಿಯನ್ ಇಂಗ್ಲೆಂಡ್ ಸೆಮಿಫೈನಲ್ ಹಾದಿ ದುರ್ಗಮವಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ 33.2 ಓವರ್ ಗಳಲ್ಲಿ 156 ರನ್ ಗೆ ಆಲೌಟಾಯಿತು. ಸುಲಭ ಗುರಿ ಬೆಂಬತ್ತಿದ ಶ್ರೀಲಂಕಾ ತಂಡ 25.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಶ್ರೀಲಂಕಾ ತಂಡ 23 ರನ್ ಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಆದರೆ ಪಾಥುಮ್ ನಿಸ್ಸಾಂಕಾ ಮತ್ತು ಸಧೀರ ಸಮರವಿಕ್ರಮ ಮೂರನೇ ವಿಕೆಟ್ ಗೆ 137 ರನ್ ಜೊತೆಯಾಟದಿಂದ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಈ ಮೂಲಕ ಶ್ರೀಲಂಕಾ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ 5 ಪಂದ್ಯಗಳಲ್ಲಿ 5ರಲ್ಲಿ ಜಯ ಗಳಿಸಿದೆ.
ಪಾಥುಮ್ ನಿಸ್ಸಾಂಕಾ 83 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 77 ರನ್ ಸಿಡಿಸಿ ಅಜೇಯರಾಗಿ ಉಳಿದರೆ, ಸಧೀರ ಸಮರವಿಕ್ರಮ 54 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ ಅಜೇಯ 65 ರನ್ ಬಾರಿಸಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಲಂಕಾ ಬೌಲರ್ ಗಳ ಸಂಘಟಿತ ದಾಳಿಗೆ ತತ್ತರಿಸಿತು. ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್ (43) , ಜಾನಿ ಬೇರ್ ಸ್ಟೊ (30) ಮತ್ತು ಡಾವಿಡ್ ಮಲಾನ್ (28) ತಂಡದ ಪರ ಹೋರಾಟ ನಡೆಸಿದರು. ಲಂಕಾ ಪರ ಲಹಿರು ಕುಮಾರ 3, ಆಂಜೆಲೊ ಮ್ಯಾಥ್ಯೂಸ್ ಮತ್ತು ಕುಸಾನ್ ರಜಿತಾ ತಲಾ 2 ವಿಕೆಟ್ ಗಳಿಸಿದರು.