ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2ರಂದು ಬಂಧಿಸಲು ಕೇಂದ್ರ ಸಿದ್ಧತೆ ನಡೆಸಿದೆ ಎಂದು ಆಮ್ ಆದ್ಮಿ ಪಕ್ಷದ ಅತಿಶಿ ಆರೋಪಿಸಿದ್ದಾರೆ.
ಮದ್ಯ ಮಾರಾಟ ಅಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಆದರೆ ಅವರನ್ನು ಬಂಧಿಸುವ ಕುತಂತ್ರ ಹೊಂದಿದೆ ಎಂದು ಅತಿಶಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2ರಂದು ಇಡಿ ಬಂಧಿಸಲಾಗಿದೆ. ಆದರೆ ಅವರು ಅಕ್ರಮ ಎಸಗಿದ್ದಕ್ಕಾಗಿ ಬಂಧಿಸಲಾಗುತ್ತಿಲ್ಲ. ಬದಲಾಗಿ ಬಿಜೆಪಿ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಬಂಧಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.
ದೆಹಲಿ ಮದ್ಯ ನಿಯಮದ ಹಿನ್ನೆಲೆಯಲ್ಲಿ ಅಕ್ರಮ ಹಣದ ವಹಿವಾಟು ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ನವೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.