ವಿವಾದಿತ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಕನ್ನಡ ಧ್ವಜ ಹಾರಿಸುವ ಮೂಲಕ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮ ಆಚರಿಸಲು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ.
ವಿವಾದಿತ ಕೇಂದ್ರ ಬಿಂದು ವಾಗಿದ್ದ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಸಲು ಅನುಮತಿ ನೀಡುವ ಮೂಲಕ ವಿವಾದಕ್ಕೆ ಹೈಕೋರ್ಟ್ ತೆರೆ ಎಳೆದಿದೆ.
ವಿವಾದಿತ ಈದ್ಗಾ ಮೈದಾನ ವಕ್ಫ್ ಬೋರ್ಡ್ ಆಸ್ತಿ ಆಗಿದ್ದು, ಇಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಸೇರಿದಂತೆ ಯಾವುದೇ ಸಾರ್ವಜನಿಕ ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ ನೀಡಿರಲಿಲ್ಲ.
ಮಂಗಳವಾರ ಆದೇಶ ನೀಡಿರುವ ಹೈಕೋರ್ಟ್, ಮೂರು ದಿನಗಳ ಕಾಲ ಸಂಸ್ಕೃತಿಕ ಕಾರ್ಯಕ್ರಮಕ್ಕೆ ಒಪ್ಪಿಗೆ ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಾಡಧ್ವಜ ಹಾರಾಟಕ್ಕೆ ಅನುಮತಿ ನೀಡಿದ್ದಾರೆ.
ಚಾಮರಾಜ ಪೇಟೆ ನಾಗರೀಕ ಹೋರಾಟ ಸಮಿತಿಗೆ ನೈತಿಕ ಜಯವಾಗಿದ್ದು, ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಿ ಅಂತ ಹೈ ಕೋಟ್೯ ಮೊರೆ ಹೋಗಿತ್ತು.