ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಿಗ್ಗೆ 15 ಸಚಿವರನ್ನು ಉಪಹಾರ ಸೇವನೆಗೆ ಆಹ್ವಾನಿಸಿದ್ದಾರೆ. ಈ ಮೂಲಕ ಬಣ ರಾಜಕೀಯಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ.
5 ವರ್ಷ ನಾನೇ ಮುಖ್ಯಮಂತ್ರಿ ಎಂಬ ಹೇಳಿಕೆ ಪಕ್ಷದಲ್ಲಿ ಸಂಚಲನ ಮೂಡಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಉಪಹಾರ ಸೇವನೆಗೆ ಸಚಿವರನ್ನು ಆಹ್ವಾನಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯದಲ್ಲಿ ಸಿಎಂ ರೇಸ್ ಪೈಪೋಟಿ ಮತ್ತು ಪಕ್ಷದಲ್ಲಿನ ಅಸಮಾಧಾನ ಹಿನ್ನೆಲೆಯಲ್ಲಿ ಮೊದಲ ಹಂತವಾಗಿ ಸಿದ್ದರಾಮಯ್ಯ ನಾಳೆ 15 ಸಚಿವರಿಗೆ ತಿಂಡಿಗೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.
ಪವರ್ ಶೇರಿಂಗ್ ಬಗ್ಗೆ ಅಸಂಬದ್ಧ ಸಚಿವರ ಹೇಳಿಕೆಗಳ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ಕಾಂಗ್ರೆಸ್ ಪಕ್ಷದ ವಕ್ತಾರರಾದ ರಣದೀಪ್ ಸುರ್ಜೇವಾಲಾ ಮತ್ತು ವೇಣುಗೋಪಾಲ್ ಖಡಕ್ ವಾರ್ನಿಂಗ್ ಕೊಟ್ಟ ಹಿನ್ನೆಲೆಯಲ್ಲಿ ಔಚಾರಿಕ ಸಭೆ ಇದಾಗಿದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭಾ ಚುನಾವಣೆ ತಯಾರಿ ಮತ್ತು ಪಕ್ಷ ಸಂಘಟನೆ ಬಗ್ಗೆಯೂ ಇದೇ ಸಂದರ್ಭದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.