ನೇಪಾಳ, ದೆಹಲಿ ಸೇರಿದಂತೆ ಹಲವು ಭಾಗಗಳಲ್ಲಿ ಶುಕ್ರವಾರ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, 132 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ನೇಪಾಳದ ರುಕುಂ ಜಿಲ್ಲೆಯ ಜಾಜಾರ್ ಕೋಟ್ ನಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. 140ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜಧಾನಿ ಕಠ್ಮಂಡುವಿನಿಂದ 500 ಕಿ.ಮೀ. ದೂರದಲ್ಲಿ ಭೂಕಂಪನ ಸಂಭವಿಸಿದ್ದು, ತಡರಾತ್ರಿ ಭೂಮಿ ಕಂಪಿಸಿದ್ದರಿಂದ ಹಲವಾರು ಕಟ್ಟಡಗಳು ಧರೆಗುರುಳಿವೆ. ಇದರಿಂದ ಮಲಗಿದ್ದ ಜನರು ಚಿರನಿದ್ರೆಗೆ ಜಾರಿದ್ದಾರೆ ಎಂದು ಸ್ಥಳೀಯ ಪೊಲೀಸರು ಘಟನೆಯನ್ನು ವಿವರಿಸಿದ್ದಾರೆ. ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಸಂಕಷ್ಟ ಸಮಯದಲ್ಲಿ ನೇಪಾಳ ಭಾರತ ನಿಲ್ಲಲಿದೆ ಎಂದು ಹೇಳಿದ್ದಾರೆ.