ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ಗ್ರಾಮ ವ್ಯಾಪ್ತಿಯಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ.

ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರಪ್ರದೇಶ ಗಡಿಯ ಚಿಕ್ಕಬಳ್ಳಾಪುರ ಜಿಲ್ಲೆಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟುಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇದರ ಬಗ್ಗೆ ಕಟ್ಟಚರ ವಹಿಸಿದೆ.

ಚಿಕ್ಕಬಳ್ಳಾಪುರ ತಾಲೂಕು ವೈದ್ಯಧಿಕಾರಿಗಳಾದ ಮಂಜುಳಾ ರವರು ಆಶಾ ಕಾರ್ಯಕರ್ತರು ಹಾಗೂ ದಾದಿಯರಿಂದ ಚಿಕ್ಕಬಳ್ಳಾಪುರ ನಗರದಲ್ಲಿ ಜಿಕಾ ಭಯಬೇಡ! ಎಚ್ಚರವಿರಲಿ ಸೊಳ್ಳೆ ನಿಯಂತ್ರಣ ನಮ್ಮೆಲ್ಲರ ಕೈಯಲ್ಲಿದೆ ಎಂದು ಪ್ರತಿಯೊಬ್ಬರಿಗೂ ಕರಪತ್ರದ ಮೂಲಕ ಮಾಹಿತಿಯನ್ನು ನೀಡುತ್ತಿದ್ದಾರೆ.

ಆದಷ್ಟು ಮನೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿ, ನಿಂತ ನೀರಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ ಅದರಿಂದ ಸುರಕ್ಷಿತ ಕ್ರಮ ವಹಿಸಿರಿ. ನೀರು ಶೇಖರಣೆಯಾದ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಿರಿ, ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಮನೆ ಮನೆ ತೆರಳಿ ಸಮೀಕ್ಷೆ ಹಾಗೂ ವೈರಸ್ ಹರಡುದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *