ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ ಅದರಲ್ಲೂ ಭಾರತ ವಿರುದ್ಧ ಹೀನಾಯ ಸೋಲಿನ ಬೆನ್ನಲ್ಲೇ ಶ್ರೀಲಂಕಾ ಕ್ರೀಡಾ ಸಚಿವ ರೋಶನ್ ರಣಸಿಂಘೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಸಂಪೂರ್ಣ ವಜಾಗೊಳಿಸಿದ್ದಾರೆ.
ಮಂಡಳಿಯಲ್ಲಿನ ಅಶಿಸ್ತು ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಕೂಡಲೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮೋಹನ್ ಡಿಸಿಲ್ವಾ ಸಂಸ್ಥೆಯ ಎರಡನೇ ಅತೀ ದೊಡ್ಡ ಹುದ್ದೆಗೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.
1996ರ ವಿಶ್ವಕಪ್ ವಿಜೇತ ತಂಡದ ನಾಯಕ ಅರ್ಜುನ್ ರಣತುಂಗಾ ಅವರನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಉಸ್ತುವಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೇ 7 ಸದಸ್ಯರ ನೂತನ ಸಮಿತಿ ರಚನೆ ಮಾಡಲಾಗಿದ್ದು, ಇದರಲ್ಲಿ ನಿವೃತ್ತ ನ್ಯಾಯಮೂರ್ತಿಗಳು ಕೂಡ ಸ್ಥಾನ ಪಡೆದಿದ್ದಾರೆ.