ಮುಡಾ ಹಗರಣ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಸುಖಾಸುಮ್ಮನೆ ವಿನಾಕಾರಣ ಬಿಜೆಪಿ – ಜೆಡಿಎಸ್ ಆರೋಪ ಮಾಡುತ್ತಿದೆ, ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಕಾನೂನು ಬಾಹಿರ ಕೆಲಸ ನಡೆಸಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಜಿ. ಪರಮೇಶ್ವರ್ , ಮುಡಾ ಹಗರಣ ಸಂಬಂಧ ಸಿಎಂ ರಾಜೀನಾಮೆ ನೀಡಬೇಕು ಹಾಗೂ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಪಾದಯಾತ್ರೆ ಮಾಡುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ. ಜನರಲ್ಲಿ ತಪ್ಪು ಸಂದೇಶ ಮೂಡಿಸುವ ಸಲುವಾಗಿ ಬಿಜೆಪಿಯವರು ಈ ರೀತಿಯಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾನೂನು ಬಾಹಿರ ಕೆಲಸ ಮಾಡಿಲ್ಲ
ಬಿಜೆಪಿಯವರು ಆರೋಪಿ ಮಾಡುತ್ತಿರುವಂತೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇದುವರೆಗೂ ಯಾವುದೇ ಕಾನೂನು ಬಾಹಿರ ಕೆಲಸವನ್ನು ಮಾಡಿಲ್ಲ. ಅದಕ್ಕಾಗಿಯೇ ಧೈರ್ಯದಿಂದ ಸಿಎಂ ಅವರು ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದಾರೆ. ತನಿಖೆಗೂ ಸಹ ಒಪ್ಪಿಸಿದ್ದಾರೆ. ಯಾವುದೇ ತಪ್ಪು ಆಗಿಲ್ಲ ಎಂದು ಪರಮೇಶ್ವರ್ ತಮಗೆ ತಾವೇ ಸಮರ್ಥನೆ ಮಾಡಿಕೊಂಡರು.