ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಭಾನುವಾರ(ಆಗಸ್ಟ್ 4) ರಾತ್ರಿ ಕುಡಿದ ಮತ್ತಿನಲ್ಲಿದ್ದ ಮಗನೇ ತನ್ನ ಹೆತ್ತ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ನಂತರ ಆ ಮಹಾತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಅವರನ್ನು ಮನೆ ಹಿಂಭಾಗದ ತಿಪ್ಪೆಗುಂಡಿಯಲ್ಲಿ ಬಿಸಾಡಿ ಪರಾರಿಯಾಗಿದ್ದ. ನಂತರ ಸ್ಥಳೀಯರೊಬ್ಬರು ಗಮನಿಸಿ ಈ ವಿಚಾರವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ, ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದೆ ಪೋಲಿಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ,
ಆರೋಪಿಗೆ ವಿವಾಹವಾಗಿದ್ದು ಕೌಟುಂಬಿಕ ಕಲಹದಿಂದಾಗಿ ಆತನ ಪತ್ನಿ ದೂರವಿದ್ದಾಳೆ ಎನ್ನಲಾಗುತ್ತಿದೆ. ಈತ ತಂದೆ ತಾಯಿಯ ಜೊತೆ ವಾಸಿಸುತ್ತಿದ್ದ ಎನ್ನಲಾಗಿದ್ದು ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.