ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ)ಯ 23 ವರ್ಷದ ಎಂಟೆಕ್ ವಿದ್ಯಾರ್ಥಿ ಮಂಗಳವಾರ ಸಂಸ್ಥೆಯ ಹಾಸ್ಟೆಲ್ನಲ್ಲಿರುವ ತನ್ನ ಕೋಣೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈ ವಿದ್ಯಾರ್ಥಿಯನ್ನು ಮಹಾರಾಷ್ಟ್ರದ ಅವಿರಾಜ್ ಹನ್ಮಂತ್ ಪವಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆತ ಸಾವನ್ನಪ್ಪಿದ್ದಾನೆ.
IISc ಸಂಸ್ಥೆಯ ಪ್ರಕಾರ, ಮಂಗಳವಾರ ಹಾಸ್ಟೆಲ್ ಕೋಣೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪವಾರ್ ಪತ್ತೆಯಾಗಿದ್ದು, ನಂತರ ಅವರನ್ನು ರಾಮಯ್ಯ ಆಸ್ಪತ್ರೆಗೆ ಸಾಗಿಸಲಾಯಿತು. ನೋಟಿಸ್ ಬೋರ್ಡ್ ನಲ್ಲಿ , “ಇನ್ಸ್ಟ್ರುಮೆಂಟೇಶನ್ ಮತ್ತು ಅಪ್ಲೈಡ್ ಫಿಸಿಕ್ಸ್ ವಿಭಾಗದಲ್ಲಿ ಎಂಟೆಕ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬನ ಸಾವನ್ನು ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ ಎಂದು ತಿಳಿಸಿದೆ. 6 ಆಗಸ್ಟ್ 2024 ರಂದು ವಿದ್ಯಾರ್ಥಿಯು ಹಾಸ್ಟೆಲ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ರಾಮಯ್ಯ ಆಸ್ಪತ್ರೆಗೆ ಧಾವಿಸಿದರು ಸಹ ದುರದೃಷ್ಟವಶಾತ್ ಆತ ಬದುಕುಳಿಯಲಿಲ್ಲ.
ಸದಾಶಿವನಗರ ಪೊಲೀಸ್ ಠಾಣೆಯ ಅಧಿಕಾರಿಗಳ ಪ್ರಕಾರ, ಸಾವಿಗೆ ಕಾರಣ ಇನ್ನೂ ತನಿಖೆ ನಡೆಯುತ್ತಿದೆ. “ನಾವು ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿನ ಕಾರಣವನ್ನು ಕಂಡುಹಿಡಿಯಬಹುದು. ನಾವು ಅಸ್ವಾಭಾವಿಕ ಸಾವಿನ ವರದಿಯನ್ನು (ಯುಡಿಆರ್) ದಾಖಲಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮದ ಸುದ್ಧಿಗಾರರೊಂದಿಗೆ ತಿಳಿಸಿದರು.