ಅಕ್ಟೋಬರ್ 12 ರಂದು ಮಧ್ಯಾಹ್ನ 1.41 ರಿಂದ 2.10 ರವರೆಗೆ ಜಂಬೂ ಸವಾರಿ ಮತ್ತು ನಂದಿ ದ್ವಜ ಪೂಜೆ ಆರಂಭವಾಗಲಿದ್ದು, ಸಂಜೆ 4 ಗಂಟೆಗೆ ಪೂಜೆಯೊಂದಿಗೆ ಮೆರವಣಿಗೆ ಪ್ರಾರಂಭವಾಗಲಿದೆ ಎಂದು ಸಿಎಂ ತಿಳಿಸಿದರು.
ಕಳೆದ ವರ್ಷ ಪ್ರವಾಸಿಗರ ಅನುಕೂಲಕ್ಕಾಗಿ ದೀಪದ ವ್ಯವಸ್ಥೆಯನ್ನು ಕಳೆದ ಬಾರಿ ಒಂದು ವಾರ ವಿಸ್ತರಿಸಲಾಗಿತ್ತು. ಈ ಬಾರಿ ದಸರಾ ನಂತರ 21 ದಿನಗಳ ಕಾಲ ದೀಪಾಲಂಕಾರ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ತಿಳಿಸಿದರು.
ಪ್ರವಾಸಿಗರಿಗೆ ನೆರವಾಗಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ಮಿತ್ರ ಮತ್ತು ಗೃಹರಕ್ಷಕರನ್ನು ನೇಮಿಸಲಾಗುವುದು. ವಾಹನ ನಿಲುಗಡೆ ಹಾಗೂ ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೈಸೂರನ್ನು ಕೇಂದ್ರವಾಗಿಟ್ಟುಕೊಂಡು ಕೆಎಸ್ಆರ್ಟಿಸಿ ಸಹಯೋಗದಲ್ಲಿ ಪ್ರವಾಸೋದ್ಯಮ ಸರ್ಕ್ಯೂಟ್ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಸಾಂಸ್ಕೃತಿಕ ಕಾರ್ಯಕ್ರಮ, ವಸ್ತುಪ್ರದರ್ಶನ, ದೀಪಾಲಂಕಾರ, ಆಹಾರ ಮೇಳ ಮತ್ತಿತರ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ ಅರ್ಥಪೂರ್ಣವಾಗಿ ಆಯೋಜಿಸಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಡಬೇಕು, ಸ್ಥಳೀಯರನ್ನು ಪ್ರೋತ್ಸಾಹಿಸಬೇಕು. ದಸರಾಗೆ ಹೊಸ ರೂಪ ನೀಡಲು ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ನೀಡಲಾಗಿದೆ. ದಸರಾ ಉತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ ಎಂದು ಸಿಎಂ ಹೇಳಿದ