ಬೆಂಗಳೂರು: ಸಚಿವ ರಾಮಲಿಂಗರೆಡ್ಡಿಯವರ ಪುತ್ರಿ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿ ಸೌಮ್ಯರೆಡ್ಡಿರವರನ್ನು ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ನೇಮಕಗೊಳಿಸಲಾಗಿದೆ.
ಸಚಿವ ರಾಮಲಿಂಗಾರೆಡ್ಡಿ ಪುತ್ರಿಯಾದ ಮಾಜಿ ಶಾಸಕಿ ಸೌಮ್ಯ ರೆಡ್ಡಿಗೆ ಅದೃಷ್ಟದಂತೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದು ಬಂದಿದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಆದೇಶದ ಮೇರೆಗೆ ಸೌಮ್ಯ ರೆಡ್ಡಿರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಜೊತೆಗೆ ಚಂಡೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರ ನೇಮಕ ಮಾಡಿ ಎಐಸಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಸೌಮ್ಯಾ ರೆಡ್ಡಿ ಅವರು ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿಯಾಗಿದ್ದು ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂ.ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ತೇಜಸ್ವಿ ಸೂರ್ಯ ವಿರುದ್ಧ ಪರಾಜಿತಗೊಂಡಿದ್ದರು. ಸದ್ಯ ಪುಷ್ಪಾ ಅಮರನಾಥ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು.
ಸೌಮ್ಯ ರೆಡ್ಡಿ ಮಾರ್ಚ್ 18, 1983ರಲ್ಲಿ ಜನಿಸಿದ್ರು, ಬೆಂಗಳೂರಿನ ಆರ್.ವಿ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಅಧ್ಯಯನ ಪೂರ್ಣಗೊಳಿಸಿ, ನ್ಯೂಯಾರ್ಕ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್ ಅಧ್ಯಯನವನ್ನು ಸೌಮ್ಯ ರೆಡ್ಡಿ ಪೂರ್ಣಗೊಳಿಸಿದ್ದಾರೆ.
ಸೌಮ್ಯರೆಡ್ಡಿಯವರು ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತೆ, ಮಾಜಿ ಶಾಸಕಿಯಾಗಿದ್ದು, ಇದೇ ತಮ್ಮ ಉದ್ಯೋಗ ಎಂದು ಈ ಹಿಂದೆ ಲೋಕಸಭಾ ಚುನಾವಣೆ ನಾಮಪತ್ರ ಅಫಿಡವಿಟ್‌ನಲ್ಲಿ ಉಲ್ಲೇಖಿಸಿ ಸದಾ ಕಾರ್ಯಚಟುವಟಿಕೆಯಲ್ಲಿ ಆಕ್ಟಿವ್ ಆಗಿದ್ದರು .
ಇದರ ಬೆನ್ನಲ್ಲೇ ಎರಡು ವಾರಗಳ ಹಿಂದೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಸಂದರ್ಶನ ನಡೆದಿದ್ದು ಇದರಲ್ಲಿ ಜಯಶೀಲರಾದ ಕಾರಣ ಕಾಂಗ್ರೆಸ್ ಹೈಕಮಾಂಡ್ , ಸೌಮ್ಯರೆಡ್ಡಿ ಅವರನ್ನು ಅಂತಿಮವಾಗಿ ಕೆಪಿಸಿಸಿ ಮಹಿಳಾ ಅಧ್ಯಕ್ಷೆಯನ್ನಾಗಿ ನೇಮಕ ಮಾಡಿದೆ.
ಬದವಣಿಗೆ ...ಶಶಿಕಲ