37 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಆಗಸ್ಟ್ 4 ರಂದು ನಿಗೂಢವಾಗಿ ನಾಪತ್ತೆಯಾಗಿದ್ದಾರೆ, ಅವರ ಪತ್ನಿ ಶ್ರೀಪರ್ಣಾ ದತ್ತಾ ಅವರು ನಗರ ಪೊಲೀಸ್ ಕಮಿಷನರ್ ಅವರ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಕಳವಳ ವ್ಯಕ್ತಪಡಿಸುವ ಮೊದಲು ಕೊಡಿಗೇಹಳ್ಳಿ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಪತ್ತೆ ಹಚ್ಚಲು ಸಹಾಯ ಕೋರಿದ್ದಾರೆ.

ದೂರಿನ ಪ್ರಕಾರ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ ಮತ್ತು ಮಕ್ಕಳೊಂದಿಗೆ ಟಾಟಾನಗರದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ವಿಪಿನ್ ಗುಪ್ತಾ ಬೈಕ್‌ನಲ್ಲಿ ಮನೆಯಿಂದ ಹೊರಟಿದ್ದಾರೆ. ಕೆಲವೇ ನಿಮಿಷಗಳಲ್ಲಿ, ಅವರ ಫೋನ್ ಸ್ವಿಚ್ ಆಫ್ ಆಗುವ ಮೊದಲು ಅವರ ಖಾತೆಯಿಂದ ₹ 1.8 ಲಕ್ಷ ವಹಿವಾಟು ನಡೆದಿದೆ ಆದ್ರೆ ಅವರು‌ ಮನೆಗೆ ಬಂದಿರುವುದಿಲ್ಲ ಎಂದು ಅವರ ಪತ್ನಿ ಆರೋಪಿಸಿದ್ದಾರೆ.

ಆತನಿಗಾಗಿ ಎರಡು ದಿನ ಕಾದು ಆತಂಕಗೊಂಡ ಪತ್ನಿ, ಕೊಡಿಗೇಹಳ್ಳಿ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾರೆ. ಪೊಲೀಸರು ಆಗಸ್ಟ್ 6 ರಂದು ನಾಪತ್ತೆ ದೂರು ದಾಖಲಿಸಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *