ಮನೆಯಲ್ಲಿನ ಸಿಲಿಂಡರ್ ಸ್ಪೋಟಗೊಂಡ ಕಾರಣ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರದ ಬೀಡ್ ಮೂಲದ ಸೂರ್ಯಕಾಂತ ಸೆಳಕೆ(55) ಮೃತ ದುರ್ದೈವಿ.
ಮತ್ತೋರ್ವ ಕಾರ್ಮಿಕ ಜ್ಞಾನೋದಯ ಎಂಬಾತನ ಕಾಲಿಗೆ ಗಂಭೀರ ಗಾಯವಾಗಿದ್ದು ಆತನನ್ನು ಚಿಕ್ಕೋಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇತ್ತ ಸಿಲಿಂಡರ್ ಸ್ಪೋಟದ ತೀವ್ರತೆಗೆ ಪಕ್ಕದ ಮನೆಯ ಗೋಡೆ ಕುಸಿತಗೊಂಡಿದ್ದು ಆ ಗೋಡೆಯು ಮಕ್ಕಳಿಬ್ಬರ ಮೇಲೆ ಬಿದ್ದು ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ ಇದರಿಂದಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಆ ಎರಡು ಮಕ್ಕಳಿಗೆ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ ಇದೆಲ್ಲವು ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದ್ದು ಪೋಲಿಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.