ಹುಬ್ಬಳ್ಳಿ: ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಬಚ್ಚಾ ಖಾನ್ ಸಹಚರರ ತಂಡವು ನಗರದ ವ್ಯಕ್ತಿಯೋರ್ವನಿಗೆ ನಿರಂತರವಾಗಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹು-ಧಾ ಸಿಸಿಬಿ ಪೊಲೀಸರು ನಟೋರಿಸ್ ರೌಡಿ ಬಚ್ಚಾ ಖಾನ್ ಸೇರಿದಂತೆ 8 ಜನರನ್ನು ಬಂಧಿಸಿದ್ದಾರೆ.
ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಖರೀದಿಗಾರರು ಹಾಗೂ ಮಾರಾಟಗಾರರ ನಡುವೆ ವ್ಯವಹಾರಕ್ಕೆ ಸಂಬಂಧಿಸಿ ವಿವಾದಯುಂಟಾದ ಹಿನ್ನಲೆಯಲ್ಲಿ ಬಚ್ಚಾಖಾನ್ ಸಹಚರರ ತಂಡವು ಜಮೀನು ಮಾರಾಟಗಾರರಿಗೆ ಕೋಟ್ಯಾಂತರ ರೂ. ಕೊಡುವಂತೆ ನಿರಂತರವಾಗಿ ಬೆದರಿಕೆ ಕರೆಗಳನ್ನು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕರು ಸಿಸಿಬಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಆರೋಪಿಗಳ ಪತ್ತೆಗಾಗಿ 3 ತಂಡ ರಚಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ನಳ್ಳಿ-ಧಾರವಾಡದಲ್ಲಿ 7 ಜನರು ಬಂಧಿಸಲಾಗಿದ್ದು, ಬೆಂಗಳೂರಿನಲ್ಲಿ ಪ್ರಮುಖ ಆರೋಪಿ ಬಚ್ಚಾಖಾನ್ ನನ್ನು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುವುದು ಎಂದು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ತಿಳಿಸಿದರು.
ಬಚ್ಚಾಖಾನ್ ನಕರಾ..
ಪೊಲೀಸರು ವಶಕ್ಕೆ ಪಡೆದು ಉಪನಗರ ಪೊಲೀಸ್ ಠಾಣೆಗೆ ಕರೆ ತರಲಾಗುತ್ತು. ಆಗ ಪ್ರಮುಖ ಆರೋಪಿ ಬಚ್ಚಾಖಾನ್ ನಕರಾ ಮಾಡಿದ್ದಾನೆ. ಪೊಲೀಸ್ ಕಮಿಷನರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆಯೇ ಮುಖಕ್ಕೆ ಹಾಕಿದ್ದ ಕಪ್ಪು ವಸ್ತ್ರ ತಗೆದು “ಹೆ ಸಬ್ ಜುಟ್ ಹೈ ” ಇದೊಂದು ಸುಳ್ಳು ಕೇಸ್ ಎಂದು ಕೂಗಾಡಿದ ಘಟನೆ ನಡೆಯಿತು.