ಸರಕಾರಿ ಬಸ್ ಹಾಗು ಖಾಸಗಿ ಶಾಲೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಸರಕಾರದಿಂದ ಪರಿಹಾರ ಕೊಡಲಾಗುವುದು ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ಸರಕಾರಿ ಬಸ್ ಹಾಗು ಲೋಯೋಲಾ ಶಾಲೆಯ ಬಸ್ ನಡುವೆ ಅಪಘಾತ ಸಂಭವಿಸಿದ್ದು,ಇದಕ್ಕೆ ತಗ್ಗು ಗುಂಡಿಗಳೆ ಕಾರಣ ನಮಗೆ ನ್ಯಾಯಬೇಕು ಜಿಲ್ಲಾಧಿಕಾರಿ ಸಮಸ್ಯೆ ಆಲಿಸಿ ಮಾಧ್ಯಮದವರೊಂದಿಗೆ ಮಾತನಾಡಿ ತಿಳಿಸಿದರು.
ಸರಕಾರಿ ಬಸ್ ಹಾಗು ಖಾಸಗಿ ಶಾಲಾ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಗಾಯಗೊಂಡವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಕೆಲಸ ಮಾಡಲಾಗಿದೆ.
ಹೋರಾಟಗಾರರು ಇದಕ್ಕೆಲ್ಲ ಲೋಕೋಪಯೋಗಿ ಇಲಾಖೆ ಗುಂಡಿ ಮುಚ್ಚದೆ ಇರುವುದಕ್ಕೆ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ, ಈ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿಸುವ ಕೆಲಸ ಮಾಡುತ್ತೇನೆ ಮಾಧ್ಯಮದವರಿಗೆ ಸ್ಪಷ್ಟಪಡಿಸಿದರು.